ತಿರುವನಂತಪುರಂ: ಶ್ರೀಲಂಕಾದ ಸರಣಿ ಬಾಂಬ್ ಸ್ಫೋಟದ ಬೆನ್ನಲ್ಲೇ ಲಕ್ಷದ್ವೀಪಕ್ಕೆ 15 ಐಸಿಸ್ ಉಗ್ರರು ಬರುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಕೇರಳದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
15 ಜನ ಇಸ್ಲಾಮಿಕ್ ಸ್ಟೇಟ್ ಉಗ್ರರು ಶ್ರೀಲಂಕಾದಿಂದ ಬಿಳಿ ಬಣ್ಣದ ದೋಣಿಯಲ್ಲಿ ಲಕ್ಷದ್ವೀಪದ ಕಡೆ ತೆರಳುತ್ತಿದ್ದಾರೆ. ಅವರು ಲಕ್ಷದ್ವೀಪದಲ್ಲಿ ಇದ್ದುಕೊಂಡು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಬಹುದು ಎಂಬ ಭಾರತೀಯ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ. ಮಾರ್ಚ್ 23 ರಂದು ಶ್ರೀಲಂಕಾ ಈ ಸೂಚನೆ ನೀಡಿದ ಬೆನ್ನಲ್ಲೇ ಕೇರಳದ ಕೋಸ್ಟಲ್ ಪೊಲೀಸ್ ಈ ಮಾಹಿತಿಯನ್ನು ಬಹಿರಂಗ ಪಡಿಸಿದೆ.
ಶ್ರೀಲಂಕಾದಲ್ಲಿ ಏಪ್ರಿಲ್ 21 ರಂದು ನಡೆದ ಸರಣಿ ಬಾಂಬ್ ಸ್ಫೋಟದ ನಂತರ ನಾವು ಕರಾವಳಿ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅನುಮಾನಾಸ್ಪದ ಚಟುವಟಿಕೆಗಳು ಕರಾವಳಿ ಪ್ರದೇಶದಲ್ಲಿ ಕಂಡು ಬಂದರೆ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಮುದ್ರದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ಹಡಗುಗಳು ಕಂಡಬಂದರೆ ಆದರ ಬಗ್ಗೆ ಎಚ್ಚರಿಕೆ ವಹಿಸುವಂತೆ ಕರಾವಳಿ ಪೊಲೀಸ್ ಠಾಣೆಗೆ ಸೂಚನೆ ನೀಡಲಾಗಿದೆ.
Kerala coast on high alert after 15 Islamic State terrorists set off for Lakshadweep