ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಎಂಎಂಕೆ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾವಣೆ ಮಾಡಿದ್ದರೂ ಕೆಲವು ಕಡೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗಿಲ್ಲ ಎಂದು ಆರೋಪಿಸಿ ಎಎಂಎಂಕೆ ಮುಖಂಡ ಟಿಟಿವಿ ದಿನಕರನ್ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದಾರೆ.
ಪಕ್ಷದ ಬೆಂಬಲಿಗರು ನಮ್ಮ ಅಭ್ಯರ್ಥಿಗಳಿಗೆ ಮತಹಾಕಿದ್ದಾರೆ. ಆದರೆ, ಇವು ಇವಿಎಂಗಳಲ್ಲಿ ದಾಖಲಾಗದಿರುವುದು ಅಚ್ಚರಿ ತಂದಿದೆ. ಕೆಲವು ಬೂತ್ಗಳಲ್ಲಿ ಮಾತ್ರ ಈ ರೀತಿಯಾಗಲು ಹೇಗೆ ಸಾಧ್ಯ? ಚುನಾವಣಾ ಆಯೋಗ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಯಾವ್ಯಾವ ಮತಗಟ್ಟೆಗಳಲ್ಲಿ ಈ ರೀತಿಯಾಗಿದೆ ಎಂಬ ವಿವರ ಸಂಗ್ರಹಿಸುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.
AMMK,TTV Dinakaran