ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದುಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಆಪರೇಷನ್ ಕಮಲ ಹತ್ತಿಕ್ಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಕಾಂಗ್ರೆಸ್‌ಗೆ ಬಲ ತುಂಬಲು ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯದ ಕೈ ನಾಯಕರೊಂದಿಗೆ, ಸಚಿವರ ಜತೆ ಗುಲಾಂ ನಬಿ ಆಜಾದ್ ಸಭೆ ನಡೆಸಲಿದ್ದು, ಅತೃಪ್ತ ಶಾಸಕರ ಸಮಾಧಾನ ನಡೆಸುವ ನಿಟ್ಟಿನಲ್ಲಿ ಕೂದ ಮಾತಕತೆ ನಡೆಸಲಿದ್ದಾರೆ. ಅಲ್ಲದೇ ರೋಷನ್ ಬೇಗ್ ಅವರ ಅಸಮಾಧಾನಕ್ಕೂ ಕಡಿವಾಣ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಬಾರದು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಕೆಲವರು ಸಚಿವ ಸ್ಥಾನ ತ್ಯಾಗ ಮಾಡಲೇಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ರಾಹುಲ್ ಸೂಚನೆ ಮೇರೆಗೆ ಕೆ ಸಿ ವೇಣುಗೋಪಾಲ್ ಮತ್ತು ಗುಲಾಂ ನಬಿ ಆಜಾದ್ ರಾಜ್ಯಕ್ಕೆ ಆಗಮಿಸಿದ್ದಾರೆ.