ಬೆಂಗಳೂರು,ಮೇ 28- ತೋಟಗಾರಿಕೆ ಇಲಾಖೆ ವತಿಯಿಂದ ಮೇ 30ರಿಂದ ಜೂ.24ರವರೆಗೆ ರಾಜ್ಯಮಟ್ಟದ ಮಾವು ಮತ್ತು ಹಲಸು ಮೇಳವನ್ನು ಲಾಲ್ಬಾಗ್ನಲ್ಲಿ ಆಯೋಜಿಸಲಾಗಿದೆ.
ಮೇ 30ರಂದು ನಡೆಯುವ ಮಾವು ಮೇಳವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಲಿಸಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ರೈತರೇ ಬೆಳೆದ ಹಣ್ಣುಗಳನ್ನು ಮೇಳದಲ್ಲಿ ಮಾರಾಟ ಮಾಡಲಾಗುತ್ತದೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಹಣ್ಣುಗಳು ಲಭ್ಯವಿದೆ ಎಂದರು.
ಕಾರ್ಬೈಡ್ಮುಕ್ತ ಹಣ್ಣುಗಳನ್ನು ಮೇಳದಲ್ಲಿ ಮಾರಾಟ ಮಾಡಲಾಗುತ್ತಿದೆ.50ಕ್ಕೂ ಹೆಚ್ಚು ತಳಿಯ ಮಾವಿನಹಣ್ಣು 10ಕ್ಕೂ ಹೆಚ್ಚು ತಳಿಯ ಹಲಸಿನ ಹಣ್ಣುಗಳು ಮಾರಾಟಕ್ಕೆ ಲಭ್ಯವಿದ್ದು ಹಲಸು ಹಾಗೂ ಮಾವಿನ ಖಾದ್ಯಗಳು ದೊರೆಯಲಿವೆ ಎಂದು ಅವರು ತಿಳಿಸಿದರು.