![siddaramaiah](http://kannada.vartamitra.com/wp-content/uploads/2019/05/siddaramaiah-5-508x381.jpg)
ಬೆಂಗಳೂರು, ಮೇ 29-ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸಂಪುಟ ಪುನಾರಚನೆ ಅಥವಾ ವಿಸ್ತರಣೆÉ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಜೆಡಿಎಸ್-ಕಾಂಗ್ರೆಸ್ ನಾಯಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸುಭದ್ರವಾಗಿದೆ. ಯಾವುದೇ ಅಪಾಯ ಇಲ್ಲ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಾವುದೇ ಅಂತಿಮ ನಿರ್ಧಾರಗಳಾಗಿಲ್ಲ. ಚರ್ಚೆ ಮುಂದುವರೆದಿದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕು. ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಬಾರದು. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಅವರು ಮುಂದುವರೆಯಬೇಕು ಎಂದು ಹೇಳಿದರು.