ಆತಂಕಕ್ಕೆ ಕಾರಣವಾದ ಕೆಐಎ ಟರ್ಮಿನಲ್ ಸಮೀಪದ ಅಂಗಡಿಯೊಂದರಲ್ಲಿ ಕಾಣಿಸಿದ ಬೆಂಕಿ

Fire Fierce Hot Flames Burning Orange Heat

ಬೆಂಗಳೂರು, ಮೇ 29- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ನಲ್ಲಿ ಇಂದು ಬೆಳಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು.

ವಿಮಾನ ನಿಲ್ದಾಣದ ಟರ್ಮಿನಲ್ ಸಮೀಪದ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಏರ್ಪೋರ್ಟ್ನ ಅಗ್ನಿಶಾಮಕ ಕಾರ್ಯಕರ್ತರೊಂದಿಗೆ ಬೆಂಕಿ ನಂದಿಸಿದರು.

ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಂಗಡಿಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ.

ಶಾರ್ಟ್ ಸಕ್ರ್ಯೂಟ್‍ನಿಂದ ಈ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ