ಅಮಿತ್ ಶಾಗೆ ವಿತ್ತ ಖಾತೆ; ಜೆ ಪಿ ನಡ್ಡಾಗೆ ರಾಷ್ಟ್ರಾಧ್ಯಕ್ಷ ಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯುವ ಸಂಭಾವ್ಯ ಸಚಿವರ ಪಟ್ಟಿ ಈಗಗಾಲೇ ಸಿದ್ಧಗೊಂಡಿದೆ. ಈ ನಡುವೆ ಅಮಿತ್ ಶಾ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗಿದ್ದು, ಅವರಿಗೆ ವಿತ್ತ ಖಾತೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಮಿತ್ ಶಾ ಅವರಿಂದ ತೆರವಾದ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಜೆ ಪಿ ನಡ್ಡಾ ಅವರನ್ನು ನೇಮಕ ಮಾಡುವ ಸಾಧ್ಯತೆಯಿದೆ. ಇನ್ನು ಸುಷ್ಮಾ ಸ್ವರಾಜ್ ಅವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ವಿಚಾರ ಇನ್ನೂ ನಿಗೂಢವಾಗಿಯೇ ಇದೆ. ಈ ನಡುವೆ ಸುಷ್ಮಾ ಸ್ವರಾಜ್, ಮೋದಿ ಅವರು ಕರೆದಿದ್ದ ಸಂಭಾವ್ಯ ಸಚಿವರ ಸಭೆಯಲ್ಲಿ ಸುಷ್ಮಾ ಭಾಗಿಯಾಗದೇ ಗೈರಾಗಿದ್ದಾರೆ.

ಪ್ರಧಾನಿ ಮೋದಿ ಪದಗ್ರಹಣಕ್ಕೆ ಇನೇ ನು ಕೆಲ ಕ್ಷಣಗಳು ಮಾತ್ರ ಬಾಕಿಯಿದ್ದು, ಈ ನಡುವೆ ಪ್ರಧಾನಿ ಮೋದಿ ಸಂಭಾವ್ಯ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದರು.

ದೆಹಲಿಯ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ವಿ ಕೆ ಸಿಂಗ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ರಾಮದಾಸ್‌ ಅಠಾವಳೆ, ರಾಮ್‌ವಿಲಾಸ್‌ ಪಾಸ್ವಾನ್‌, ಭೂಪೇಂದ್ರ ಯಾದವ್‌, ಥಾವರ್ ಚಂದ್ ಗೆಹ್ಲೋಟ್, ರವಿಶಂಕರ್ ಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ