ದೇಶದ 16ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೋಕಸಭಾ ಚುನಾವಣೆ-2019ರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿದೆ. ದೇಶದ 16ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆಗೆ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ಮೋದಿಯವರಿಗೆ ಪ್ರತಿಜ್ನಾವಿಧಿ ಬೋಧಿಸಿದರು. ಮೋದಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರಮಾಡಿದರು.

ಇದೇ ವೇಳೆ ಸಚಿವರಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಡಿ ವಿ ಸದಾನಂದ ಗೌಡ, ನಿರ್ಮಲಾ ಸೀತಾರಾಮನ್, ರಾಮ್ ವಿಲಾಸ್ ಪಾಸ್ವಾನ್, ನರೇಂದ್ರ ಸಿಂಗ್ ಥೋಮರ್,ರವಿಶಂಕರ್ ಪ್ರಸಾದ್, ಥಾಮರ್ ಚಂದ್ ಗೆಹ್ಲೋಟ್,ಹರ್​ಸಿಮ್ರತ್​ ಕೌರ್​ ಬಾದಲ್​, ಸುಬ್ರಹ್ಮಣ್ಯಂ ಜೈಶಂಕರ್, ರಮೇಶ್ ಪೊಕ್ರಿಯಾಲ್ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಪದಗ್ರಹಣ ಸಮಾರಂಭಕ್ಕೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಸೂಪರ್ ಸ್ಟಾರ್ ರಜನಿಕಾಂತ್ ದಂಪತಿ ಸೇರಿದಂತೆ ದೇಶ ವಿದೇಶಗಳ ಗಣ್ಯರು ಭಾಗಿಯಾಗಿದ್ದಾರೆ.

PM Modi, Amith Shah,oath

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ