ಅರುಣ್ ಜೇಟ್ಲಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಪುಟದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ಪತ್ರ ಬರೆದಿದ್ದ ಅರುಣ್ ಜೇಟ್ಲಿ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ತಮಗೆ ನೂತನ ಸಂಪುಟದಲ್ಲಿ ಸ್ಥಾನ ಬೇಡ ಎಂದು ಅರಣ್ ಜೇಟ್ಲಿ ಮೋದಿಯವರಿಗೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದಾರೆ. ಅಲ್ಲದೇ ಮನವೊಲಿಕೆಗೂ ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂಜೆ 7 ಗಂಟೆಗೆ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅವರ ಸಂಪುಟ ಸೇರುವ ಸಚಿವರ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಆದರೆ ಹೊಸ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ಬೇಡ ಎಂದಿರುವ ಅರುಣ್ ಜೇಟ್ಲಿ ಅವರು, ಕಳೆದ 18 ತಿಂಗಳನಿಂದ ನಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರ ಸಹಾಯದಿಂದ ಸುಧಾರಿಸಿಕೊಳ್ಳುತ್ತಿದ್ದೇನೆ ಎಂದು ಪ್ರಧಾನಿ ಮೋದಿಗೆ ಪತ್ರ ಬೆರೆದಿದ್ದರು.

ಇದೀಗ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ಸಚಿವ ಸ್ಥಾನ ಬೇಡ ಎಂದು ಹೇಳಿರುವುದರಿಂದ ಈ ಬಾರಿ ಮುಖ್ಯವಾದ ಹಣಕಾಸು ಖಾತೆಯನ್ನು ಯಾರು ವಹಿಸಿಕೊಳ್ಳುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

PM Modi, meet,arun jaitly

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ