ಬೆಂಗಳೂರು, ಮೇ 30-ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸದ್ಯಕ್ಕೆ ಸಂಪುಟ ಪುನಾರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ಕುತೂಹಲ ಹೆಚ್ಚಿಸಿದ್ದಾರೆ.
ಕಾಂಗ್ರೆಸ್ನಲ್ಲಿ ಅತೃಪ್ತರನ್ನು ಸಮಾಧಾನಪಡಿಸಲು ಮುಂದಿನ ಎರಡು ವಾರಗಳೊಳಗೆ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಮಾಡಲಾಗುವುದು ಎಂಬ ವದಂತಿಗಳಿದ್ದವು. ಆದರೆ, ಅವೆಲ್ಲಕ್ಕೂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಲೇ ಇದೆ. ಅದು ಯಶಸ್ವಿಯಾಗುವುದಿಲ್ಲ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ.
ಲೋಕಸಭೆ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದು. ರಾಜ್ಯ ಸರ್ಕಾರಕ್ಕೂ ಅದಕ್ಕೂ ಸಂಬಂಧವಿಲ್ಲ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಬಿಜೆಪಿಯವರಿಗೆ ವಿಧಾನಸಭೆ ವಿಸರ್ಜಿಸಿ ಎಂದು ಕೇಳುವ ನೈತಿಕತೆ ಇಲ್ಲ ಎಂದರು.