ಆಂಧ್ರ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ವಿಜಯವಾಡ: ಆಂಧ್ರಪ್ರದೇಶ ನೂತನ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ನಡೆದ ಸಮಾರಂಭದಲ್ಲಿ ಜಗನ್ ಮೋಹನ್ ರೆಡ್ದಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಂಪುಟ ಸಚಿವರು ಜೂ.07 ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಪದಗ್ರಹಣ ಕಾರ್ಯಕ್ರಮದಲ್ಲಿ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಡಿಎಂಕೆ ನಾಯಕ ಎಂ ಕೆ ಸ್ಟ್ಯಾಲಿನ್, ಪಾಂಡಿಚರಿ ಆರೋಗ್ಯ ಸಚಿವ ಮಲ್ಲಡಿ ಕೃಷ್ಣ ರಾವ್ ವಿಶೇಷ ಅತಿಥಿಗಳಾಗಿ ಭಾಗಿಯಾಗಿದ್ದರು.

YS Jaganmohan Reddy takes oath as Andhra Pradesh CM

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ