ಯುಎನ್‍ ನ ಬಹು ಮೌಲ್ಯಯುತ ಪಾಲುದಾರ ಭಾರತ-ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರ್ರಸ್

ವಿಶ್ವಸಂಸ್ಥೆ, ಮೇ 31-ಭಾರತವು ಸಂಯುಕ್ತ ರಾಷ್ಟ್ರಗಳ(ಯುಎನ್) ಬಹು ಮೌಲ್ಯಯತ ಪಾಲುದಾರ ಎಂದು ಬಣ್ಣಿಸಿರುವ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರ್ರೆಸ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರದೊಂದಿಗೆ ಕಾರ್ಯನಿರ್ವಹಿಸಲು ತಾವು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ವಿಶ್ವಸಂಸ್ಥೆ ಮುಖ್ಯಸ್ಥರು ಈ ಹಿಂದೆಯೂ ಪರಿಸರ ಸಂರಕ್ಷಣೆ ಮತ್ತು ವಾತಾವರಣ ಬದಲಾವಣೆ ಸೇರಿದಂತೆ ಅನೇಕ ಮಹತ್ವದ ವಿಷಯಗಳಲ್ಲಿ ಮೋದಿ ಸರ್ಕಾರದ ಜೊತೆ ಕಾರ್ಯನಿರ್ವಹಿಸಿದ್ದರು ಎಂದು ಗುಟೆರ್ರಸ್ ಅವರ ಉಪ ವಕ್ತಾರ ಫರ್ಹಾನ್ ಹಖ್ ತಿಳಿಸಿದ್ದಾರೆ.

ಮೋದಿ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ವಿಶ್ವಸಂಸ್ಥೆ ಮುಖ್ಯಸ್ಥರು ಎದುರು ನೋಡುತ್ತಿದ್ದಾರೆ. ಈ ಇಬ್ಬರು ನಾಯಕರು ಉತ್ತಮ ಮತ್ತು ಸದೃಢ ಸ್ನೇಹ ಸಂಬಂಧ ಹೊಂದಿದ್ದಾರೆ. ಇದು ಮುಂದೆಯೂ ಮುಂದುವರಿಯಲಿದೆ ಎಂದು ಮೊನ್ನೆ ಸಂಯುಕ್ತ ರಾಷ್ಟ್ರಗಳ ವಕ್ತಾರ ಸ್ಪೀಪನ್ ಡುಜತ್ರಿಕ್ ಹೇಳಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ