ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರ-ಮೀಸಲಾತಿ ನೀಡುವಂತೆ ಒತ್ತಾಯಿಸಿ ಕಾಲ್ನಡಿಗೆ ಜಾಥ

ಬೆಂಗಳೂರು, ಜೂ.1- ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡಗಳಿಗೆ ಶೇ.7.5ರಷ್ಷು ಮೀಸಲಾತಿ ನೀಡುವಂತೆ ಒತ್ತಾಯಿಸಿ ಜೂ.6ರಂದು ಟೌನ್‍ಹಾಲïನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥ ಹಮ್ಮಿಕೊಂಡಿರುವುದಾಗಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಾಹಾಸಭಾ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷ ಎಂ.ನರಸಿಂಹಯ್ಯ ಮಾತನಾಡಿ, ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡುವಂತೆ ಒಂದು ದಶಕದಿಂದಲೂ ಮನವಿ ಮಾಡುತ್ತಾ ಬಂದಿದ್ದೇವೆ. ಆದರೆ ನಮ್ಮ ಬೇಡಿಕೆಗೆ ಯಾವುದೆ ರೀತಿ ಸ್ಪಂದಿಸದೆ ಸರ್ಕಾರ ಅನ್ಯಾಯ ಮಾಡಿದೆ ಎಂದು ದೂರಿದರು.

ಕುರುಬ ಜನಾಂಗವನ್ನು ಮೀಸಲಾತಿ ವ್ಯಾಪ್ತಿಗೆ ಸೇರಿಸಲು ಮುಂದಾಗುವ ಮೂಲಕ ನಮಗೆ ಅನ್ಯಾಯ ಮಾಡಲು ಸರ್ಕಾರ ಹೊರಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದರ ಬಗ್ಗೆ ಗಮನಸೆಳೆಯಲು ಇದೇ 6ರಂದು ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಹೊರಟು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಅವರು ಹೇಳಿದರು.

ಇದ್ಲಲದೆ ಎಲ್ಲ ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲೂ ಜಾಥಾ ಹಮ್ಮಿಕೊಂಡು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‍ಗಳ ಮೂಲಕ ಮನವಿ ಪತ್ರ ಸಲ್ಲಿಸುತ್ತೇವೆ ಎಂದು ಎಂ.ನರಸಿಂಹಯ್ಯ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ