ಬೆಂಗಳೂರು, ಜೂ.1- ಬೆಂಗಳೂರು ಜಲಮಂಡಲಿಯ ಸಕಾನಿಅ (ದಕ್ಷಿಣ-1) ಉಪವಿಭಾಗದಲ್ಲಿ ಜೂ.3ರಂದು ಬೆಳಗ್ಗೆ 9.30ರಿಂದ 11 ಗಂಟೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತ್ತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ನಡೆಸಲಾಗುತ್ತದೆ.
ಸಕಾನಿಅ (ದಕ್ಷಿಣ-1) ಉಪವಿಭಾಗದ ಬನಗಿರಿ, ಪೂರ್ಣಪ್ರಜ್ಞಾಲೇಔಟ್, ಬನಶಂಕರಿ, ಪದ್ಮನಾಭನಗರ, ಕುಮಾರಸ್ವಾಮಿ ಲೇಔಟ್-1, ಇಸ್ರೋ ಲೇಔಟ್, ಸೇವಾಠಾಣೆಗಳಿಗೆ ಸಂಬಂಧಿಸಿದಂತೆ ಮೊದಲನೇ ಮಹಡಿ, ಬನಗಿರಿನಗರ, ವಾಟರ್ ಟ್ಯಾಂಕ್, ದೇವೇಗೌಡ ಪೆಟ್ರೋಲ್ ಬಂಕ್ ಹತ್ತಿರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯ ನಿರ್ವಾಹಕ ಅಭಿಯಂತರರು (ದಕ್ಷಿಣ)-22945143. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ದಕ್ಷಿಣ-1) ಉಪವಿಭಾಗ-22945198.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ;22238888, ಸಹಾಯವಾಣಿ 1916 ಹಾಗೂ ವಾಟ್ಸ್ಆಪ್ ಸಂಖ್ಯೆ;8762228888 ಗೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯ ಬಳಸಿಕೊಳ್ಳ ಬಹುದಾಗಿದೆ.