ಬೆಂಗಳೂರು, ಜೂ.2- ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ 2000 ಕೋಟಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಕೇಂದ್ರದ ರಸಗೊಬ್ಬರ ಹಾಗೂ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ಅವರು ನೀಡಿರುವ ಹೇಳಿಕೆಯನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಹಕಾರ ನೀಡುವುದಾಗಿ ಹೇಳಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ರಾಜ್ಯದ ನರೇಗಾ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವುದಾಗಿ ಕೋರಿದ್ದಾರೆ.
ಬಾಕಿ ಇರುವ ಹಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಶೀಘ್ರವೇ ಒದಗಿಸಲಾಗುವುದು ಎಂದು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.