ಬೆಂಗಳೂರು, ಜೂ.2- ಕಳೆದ 2018-19ನೆ ಸಾಲಿನಲ್ಲಿ ವಿತರಿಸಲಾಗಿದ್ದ ಸ್ಮಾರ್ಟ್ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸ್ಗಳನ್ನು ಹಾಗೂ ಶಾಲಾ-ಕಾಲೇಜುಗಳಲ್ಲಿ ಈಗ ನೀಡಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಜೂ.20ರ ವರೆಗೂ ವಿದ್ಯಾರ್ಥಿಗಳು ಬಸ್ಗಳಲ್ಲಿ ಪ್ರಯಾಣಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅನುಮತಿಸಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದಾಗಿ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸಕ್ತ ಸಾಲಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ರಿಯಾಯಿತಿ ಪಾಸ್ ವಿತರಣೆ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಬಿಎಂಟಿಸಿ ಸ್ಪಷ್ಟಪಡಿಸಿದೆ.