ಬಿಹಾರ ಸಚಿವ ಸಂಪುಟ ವಿಸ್ತರಣೆ: 8 ಜೆಡಿಯು ಶಾಸಕರಿಗೆ ಸ್ಥಾನ: ಬಿಜೆಪಿ ದೂರವಿಟ್ಟ ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ತಮ್ಮ ನೇತೃತ್ವದ ನೇತೃತ್ವದ ಜೆಡಿಯುನ 8 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿಯನ್ನು ದೂರವಿಟ್ಟಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಯುಗೆ ಕೇವಲ ಒಂದು ಸ್ಥಾನವನ್ನು ನೀಡಲಾಗಿತ್ತು. ಇದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ನಿತೀಶ್ ಕುಮಾರ್, ಇನ್ನೆಂದೂ ಬಿಜೆಪಿ ಜತೆ ಜೆಡಿಯು ಸೇರುವುದಿಲ್ಲ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಇಂದು ಬಿಹಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ಸಂಪುಟದಲ್ಲಿ ಹಿರಿಯ ದಲಿತ ನಾಯಕ ಅಶೋಕ್ ಚೌಧರಿ, ಸಂಜಯ್ ಜ್ಹಾ, ನೀರಜ್ ಕುಮಾರ್, ಮಂಜು ಗೀತಾ ಮತ್ತು ರಾಮ್ ಸೇವಕ್ ರೈ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇಂದು ರಾಜ್ಯಪಾಲರು ನೂತನ ಸಚಿವರುಗಳಿಗೆ ಪ್ರಮಾಣವಚನ ಬೋಧಿಸಿದರು.

ಕಳೆದ ಗುರುವಾರ ದೆಹಲಿಯಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಾ ಸಮಾರಂಭ ವೀಕ್ಷಿಸಿ ರಾಜ್ಯಕ್ಕೆ ಆಗಮಿಸಿದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದರು. ಭವಿಷ್ಯದಲ್ಲಿ ಜೆಡಿಎಯು ಇನ್ನೆಂದಿಗೂ ಬಿಜೆಪಿ ಜೊತೆ ಸೇರುವುದಿಲ್ಲ ಎಂದು ಹೇಳಿದ್ದರು. ಕೇಂದ್ರದಲ್ಲಿ ಮೋದಿ ಸಂಪುಟದಲ್ಲಿ ಜೆಡಿಯುಗೆ ಕೇವಲ ಒಂದೇ ಒಂದು ಸಚಿವ ಸ್ಥಾನ ಸಿಕ್ಕಿರುವುದು ಈ ಅಸಮಾಧಾನಕ್ಕೆ ಕಾರಣವಾಗಿದೆ.

ಇದರಿಂದಾಗಿ ಇಂದು ನಡೆಯುತ್ತಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಗೆ ಕೇವಲ ಒಂದು ಸೀಟುಗಳು ಮತ್ತು ಎಲ್ ಜೆಪಿಯ ಯಾವೊಬ್ಬ ಶಾಸಕರಿಗೆ ಸಹ ಮಣೆ ಹಾಕಲಾಗಿಲ್ಲ.

ಲೋಕಸಭಾ ಚುನಾವಣೆಯಲ್ಲಿ ಬಿಹಾರದಿಂದ ಪಕ್ಷ ಗೆದ್ದ ಸಂಸದರ ಸಂಖ್ಯೆಗೆ ಅನುಗುಣವಾಗಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ನಿರ್ದಿಷ್ಟ ಭಾಗವನ್ನು ನೀಡಬೇಕೆಂದು ನಿತೀಶ್ ಕುಮಾರ್ ಈ ಹಿಂದೆ ಒತ್ತಾಯಿಸಿದ್ದರು. ಆದಾಗ್ಯೂ ಪ್ರಧಾನಿ ಮೋದಿ ಕೇವಲ ಒಂದು ಸ್ಥಾನಕ್ಕೆ ಸೀಮಿತಗೊಳಿಸಿದ್ದರು.

Tit for tat: Upset over 1 seat to JD(U) in Modi govt, Nitish Kumar offers single seat to BJP in Bihar cabinet

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ