ಬೆಂಗಳೂರು, ಜೂ.3-ಪ್ರತಿ ಜಿಲ್ಲೆಗೂ ತಲಾ ಎರಡರಂತೆ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಎನ್ಸಿಸಿಯನ್ನು ಪರಿಚಯಿಸಲು ನಿರ್ಧರಿಸಿರುವುದಾಗಿ ಸಚಿವ ಪ್ರಿಯಾಂಕ್ಖರ್ಗೆ ಹೇಳಿದ್ದಾರೆ.
ವಸತಿ ಶಾಲೆಯ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದಲ್ಲಿ ನಡೆದ ಎನ್ಸಿಸಿ ಕ್ಯಾಂಪ್ನಲ್ಲಿ ಭಾಗವಹಿಸಿದ್ದನ್ನು ಟ್ವಿಟರ್ನಲ್ಲಿ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿರುವ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್ಸಿಸಿಯನ್ನು ಪರಿಚಯಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಪ್ರತಿ ಜಿಲ್ಲೆಯ ಎರಡು ವಸತಿ ಶಾಲೆಯಲ್ಲಿ ಎನ್ಸಿಸಿ ತರಬೇತಿಯನ್ನು ಪರಿಚಯಿಸುವುದಾಗಿ ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೈಕಿ 18,974 ಮಂದಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದರು.ಅವರಲ್ಲಿ 17,994 ಮಂದಿ ಪಾಸಾಗುವ ಮೂಲಕ ಶೇ.94.83ರಷ್ಟು ಫಲಿತಾಂಶ ಗಳಿಸಿದ್ದಾರೆ.36 ವಿದ್ಯಾರ್ಥಿಗಳು 625ಕ್ಕೆ 600ಕ್ಕೂ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. 17,173 ವಿದ್ಯಾರ್ಥಿಗಳು ಶೇ.60ರಷ್ಟು ಅಂಕ ಗಳಿಸಿದ್ದಾರೆ. 625ಕ್ಕೆ 621 ಅಂಕ ಪಡೆದ ವಿದ್ಯಾರ್ಥಿ ನಮ್ಮ ಶಾಲೆಯಲ್ಲಿ ಓದಿದ್ದಾರೆ. ಇನ್ನಷ್ಟು ಉತ್ತಮ ಫಲಿತಾಂಶಕ್ಕೆ ಶಿಕ್ಷಣ ಸಂಸ್ಥೆಯನ್ನು ಮತ್ತಷ್ಟು ಸುಧಾರಣೆ ಮಾಡುವುದಾಗಿ ಅವರು ಟ್ವಿಟ್ ಮಾಡಿದ್ದಾರೆ.