ಬೆಂಗಳೂರು, ಜೂ.3-ವಿವಿಧ ಸಂಘಟನೆಗಳ ಸಂಯುಕ್ತಾಶ್ರಯಗಳ ಹೋರಾಟದ ಫಲವಾಗಿ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ ಒಕ್ಕೂಟ ಅಭಿನಂದನೆ ಸಲ್ಲಿಸಿದೆ.
ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕಟೇಶಯ್ಯ, ರಾಜ್ಯ ಸರ್ಕಾರಿ ಗ್ರಾಮೀಣ ಪ್ರೌಢ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡಪ್ಪ, ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸುಮಿತ್ರಾ ಎಂ. ದುರ್ಗಿ, ರಾಜ್ಯಪದವೀಧರ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಎಸ್.ವೈ.ಸೊರಟಿ, ರಾಜ್ಯ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗುರುತಿಗಡಿ, ರಾಜ್ಯ ಗ್ರಾಮೀಣ ಶಿಕ್ಷಕರ ಸಂಘದ ಖಜಾಂಚಿ ಸೋಮನಗೌಡ ಪಾಟೀಲ, ಸಹ ಕಾರ್ಯದರ್ಶಿ ನಾಗರಾಜು, ರಾಜು ಉರ್ದು ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಶಂಷೀರ್ ಖಾನ್, ಸಾವಿತ್ರಿ ಬಾಯಿ ಫುಲೆ, ಶಿಕ್ಷಕಿಯರ ಸಂಘದ ಲತಾ ಮಳ್ಳೂರ, ರಾಜ್ಯ ಪದವೀಧರೇತರ ಮುಖ್ಯ ಶಿಕ್ಷಕರ ಸಂಘದ ಕೃಷ್ಣಪ್ಪ ಮತ್ತು ರಾಜ್ಯ ದೈಹಿಕ ಶಿಕ್ಷಕರ ಸಂಘದ ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ.