ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಹಿಂದಿ ಹೇರಿಕೆ ಕುರಿತು ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ನಮ್ಮ ಅಸ್ಮಿತೆ. ನೆಲ-ಜಲ-ಭಾಷೆ ವಿಚಾರದಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸರಣಿ ಟ್ವೀಟ್‌ ಮೂಲಕ ತ್ರಿಭಾಷಾ ಸೂತ್ರವನ್ನು ವಿರೋಧಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯ ಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ” ಎಂದಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದೆ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

hindi imposition row, siddaramaiah,tweet

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ