
ಬೆಂಗಳೂರು, ಜೂ.4-ನ್ಯಾಯಾಲಯದಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಇಂದು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುತ್ತಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪ್ರಜೆಗಳ ಬಗ್ಗೆ ಅಪಾರ ಕಾಳಜಿ, ಮಮಕಾರ ಹೊಂದಿದ್ದರು. ಗಾಂಧೀಜಿ ಅವರು ಒಡೆಯರ್ ಅವರನ್ನು ರಾಜರ್ಷಿ ಎಂದೇ ಸಂಬೋಧಿಸುತ್ತಿದ್ದರು. ಮೈಸೂರನ್ನು ಭಾರತದ ರಾಮರಾಜ್ಯ ಎಂದೇ ಶ್ಲಾಘಿಸಿದ್ದರು ಎಂದು ಹೇಳಿದ್ದಾರೆ.
ಕೋರ್ಟ್ಗೆ ಹಾಜರಾಗಬೇಕೆಂಬ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುತ್ತಿಲ್ಲ, ಯಾರೂ ಕೂಡ ಗೈರುಹಾಜರಿ ಬಗ್ಗೆ ಅನ್ಯತಾ ಭಾವಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.