ಜೂ.9ರಿಂದ ಶ್ರೀನಿವಾಸ ದೇವಸ್ಥಾನದಲ್ಲಿ 43ನೇ ವಾರ್ಷಿಕ ಬ್ರಹ್ಮ ರಥೋತ್ಸವ

ಬೆಂಗಳೂರು,ಜೂ.4- ಮಹಾಲಕ್ಷ್ಮಿಪುರದಲ್ಲಿರುವ ಮರಿತಿರುಪತಿ ಎಂದೇ ಪ್ರಸಿದ್ಧವಾಗಿರುವ ಶ್ರೀನಿವಾಸ ದೇವಾಲಯದಲ್ಲಿ 43ನೇ ವಾರ್ಷಿಕ ಬ್ರಹ್ಮ ರಥೋತ್ಸವದ ಪ್ರಯುಕ್ತ ಜೂ.9ರಿಂದ 15ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜೂ.12ರಂದು ಬ್ರಹ್ಮರಥೋತ್ಸವ ನೆರವೇರಲಿದ್ದು, ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಶ್ರೀ ಶ್ರೀನಿವಾಸ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ವಿಶೇಷಾ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಜೂ.9ರಂದು ಬೆಳಗ್ಗೆ 10.30ರಿಂದ12 ಗಂಟೆಗೆವರೆಗೆ ಸ್ವಸ್ತಿವಾಚನ, ರಕ್ಷಾಬಂಧನ,ಅಂಕುರಾರ್ಪಣ, ಕಳಸ ಸ್ಥಾಪನೆ ಚತುಸ್ಥಾಪನಾರ್ಚನೆ, ಧ್ವಜಾರೋಹಣ, ಮಹಾಮಂಗಳಾರತಿ ಹಾಗೂ ಸಂಜೆ 6.30ಕ್ಕೆ ಶೇಷ ವಾಹನೋತ್ಸವ ನಡೆಯಲಿದೆ.

10ರಂದು ಬೆಳಗ್ಗೆ 9.30ರಿಂದ 10.30ರವರೆಗೆ ನಿತ್ಯಹೋಮ, ಬಲಿಹರಣ ಹಾಗೂ ಸಂಜೆ 6.30ಕ್ಕೆ ಗರುಡೋತ್ಸವ, ಜೂ.11ರಂದು ಬೆಳಗ್ಗೆ 9.30ರಿಂದ 10.30ರವರೆಗೆ ಚತುಸ್ಥಾಪನಾರ್ಚನೆ, ನಿತ್ಯಹೋಮ, ಬಲಿಹರಣ ನಡೆಯಲಿದ್ದು, ಸಂಜೆ 6.30ಕ್ಕೆ ಕಲ್ಯಾಣೋತ್ಸವ ನಡೆಯಲಿದೆ.

ಇದೇ 12ರಂದು ಬೆಳಗ್ಗೆ 11 ಗಂಟೆಯಿಂದ ಬ್ರಹ್ಮರಥೋತ್ಸವ ನಡೆಯಲಿದ್ದು, ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಶ್ರೀ ಯದುಗಿರಿ ಯತಿರಾಜ ಮಠಾಧೀಶರಾದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮಿಗಳು ರಥಕ್ಕೆ ಚಾಲನೆ ನೀಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಶಾಸಕರಾದ ಎಂ.ಕೃಷ್ಣಪ್ಪ, ಗೋಪಾಲಯ್ಯ, ಬಿಬಿಎಂಪಿ ಮಾಜಿ ಉಪಮಹಾಪೌರರಾದ ಹೇಮಲತಾ ಗೋಪಾಲಯ್ಯ, ಎಸ್.ಹರೀಶ್, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಬಿಬಿಎಂಪಿ ಸದಸ್ಯ ಎಸ್.ಕೇಶವಮೂರ್ತಿ, ಉಪಮಹಾಪೌರ ಭದ್ರೇಗೌಡ, ಮಾಜಿ ಮಹಾಪೌರ ಜೆ.ಹುಚ್ಚಪ್ಪ ಆಗಮಿಸಲಿದ್ದಾರೆ.

ಜೂ.13ರಂದು ಬೆಳಗ್ಗೆ 9.30ಕ್ಕೆ ಮಹಾಭಿಷೇಕ, ಅವಭೃತ, ವಸಂತೋತ್ಸವ ನಡೆಯಲಿದ್ದು, ಸಂಜೆ 6.30ಕ್ಕೆ ವೈರಮುಡಿ ಉತ್ಸವ ಹಾಗೂ ಜೂ.14ರಂದು ಬೆಳಗ್ಗೆ 10.30ಕ್ಕೆ ದ್ವಾದಶ ತಿರುವಾರಾಧನೆ, ಸಂಜೆ 6.30ಕ್ಕೆ ಶಯನೋತ್ಸವ ಏರ್ಪಡಿಸಲಾಗಿದೆ. ಜೂ.15ರಂದು ಬೆಳಗ್ಗೆ 6 ಗಂಟೆಗೆ ಸುಪ್ರಭಾತ ಸೇವೆ, ಮಹಾಮಂಗಳಾರತಿ ನಡೆಯಲಿದೆ ಎಂದು ಎಂದು ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ