ಪ್ರತಿಭಟನೆಯನ್ನು ಹತ್ತಿಕ್ಕಲು ನಡೆದ ಮಿಲಿಟರಿ ಕಾರ್ಯಾಚರಣೆಯಲ್ಲಿ 60 ಜನರ ಸಾವು

ಖಾರ್ಟೌಮ್, ಜೂ.5-ಆಫ್ರಿಕಾ ರಾಷ್ಟ್ರ ಸೂಡಾನ್‍ನಲ್ಲಿ ಪ್ರಜಾಪ್ರಭುತ್ವ ಪರ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ನಡೆದ ಮಿಲಿಟರಿ ಕಾರ್ಯಾಚರಣೆಯಲ್ಲಿ ಸತ್ತವರ ಸಂಖ್ಯೆ 60ಕ್ಕೇರಿದೆ.

ಸುಡಾನ್ ರಾಜಧಾನಿ ಖಾರ್ಟೌಮ್ ಮತ್ತು ಒಮ್‍ಡರ್ಮನ್ ನಗರಗಳಲ್ಲಿ ಕಳೆದ ಒಂದು ವಾರದಿಂದ ಪ್ರಜ್ಞಾಪ್ರಭುತ್ವ ಸ್ಥಾಪನೆಗೆ ಆಗ್ರಹಿಸಿ ದೇಶದ ವಿವಿಧ ನಗರಗಳಲ್ಲಿ ಪ್ರತಿಭಟನೆ ಮತ್ತು ಧರಣಿಗಳು ನಡೆಯುತ್ತಿವೆ.

ರಾಜಧಾನಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ನಡೆಸಿದ ಹಿಂಸಾತ್ಮಕ ಕಾರ್ಯಾಚರಣೆಯಲ್ಲಿ ಇಂದು ಬೆಳಗ್ಗೆ 10 ಮಂದಿ ಹತರಾದರು. ಕಳೆದ ಒಂದು ವಾರದಿಂದ ದೇಶದ ವಿವಿಧೆಡೆ 50ಕ್ಕೂ ಹೆಚ್ಚು ಮಂದಿ ಬಲಿಯಾಗಿ ಅನೇಕರು ಗಾಯಗೊಂಡಿದ್ದಾರೆ.

ಸೇನೆಯ ಹಿಂಸಾಚಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ