ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ವಿವರ ಪಡೆದ ಗೃಹ ಸಚಿವರು

ದೆಹಲಿ,ಜೂ.05-ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಬಗ್ಗೆ ವಿವರವಾದ ಪ್ರಸ್ತುತಿಯನ್ನು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಯಿತು.

ರಾಜ್ಯದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಗೃಹ ಸಚಿವರಿಗೆ ವಿವರಿಸಲಾಗಿದೆ ಎಂದು ಮೂಲಗಳು ಹೇಳಿವೆ. ಮುಂದಿನ ತಿಂಗಳು 1ರಿಂದ ಪ್ರಾರಂಭವಾಗುವ ಅಮರನಾಥ ಯಾತ್ರೆಗೆ ಮಾಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆಯೂ ಸಚಿವರಿಗೆ ಹೇಳಲಾಯಿತು. ಈ ವೇಳೆ ಕೇಂದ್ರ ಗೃಹಕಾರ್ಯದಶಿ ರಾಜೀವ್ ಗೌಬ ಮತ್ತು ಗೃಹ ಸಚಿವಾಲಯದ ಕಾಶ್ಮೀರ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

ಗೃಹ ಸಚಿವರ ನೇತೃತ್ವದಲ್ಲಿ ನಿನ್ನೆ ನೆಡೆದ ಉನ್ನತ ಮಟ್ಟದ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು. ಸಭೆಯಲ್ಲಿ ಕಚ್ಚಾ ತೈಲ ಪೂರೈಕೆ ಮತ್ತು ಏರುತ್ತಿರುವ ಬೆಲೆಗಳ ಬಗ್ಗೆ ಚರ್ಚಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ