ಬೆಂಗಳೂರು, ಜೂ.5- ಕಳೆದ 2018 ಹಾಗೂ 2019ರಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿಗಳಿಗೆ ಶುಕ್ರವಾರ ಸನ್ಮಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಅರಮನೆ ಮೈದಾನದ ಶೀಷ ಮಹಲ್ನಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತರಾಗಿರುವ ಪಕ್ಷದ ಅಭ್ಯರ್ಥಿಗಳಿಗೆ ಜೆಡಿಎಸ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.