ಬೆಂಗಳೂರು : ಸಂಪುಟ ಪುನಾರಚನೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಅವಕಾಶ ನೀಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ , ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನ ಖಾಲಿ ಇದೆಅಲ್ಲ, ಸಂಪುಟ ಪುನಾರಚನೆ ವೇಳೆ ಆ ಸ್ಥಾನ ತುಂಬುತ್ತೇವೆ. ರಾಮಲಿಂಗಾ ರೆಡ್ಡಿ ಅವರಿಗೆ ಅವಕಾಶ ನೀಡುತ್ತೇವೆ ಎಂದು ಹೇಳುವ ಮೂಲಕ ಬಂಡಾಯವೆದ್ದಿದ್ದ ಹಿರಿಯ ಕಾಂಗ್ರೆಸ್ ನಾಯಕರೆಡ್ಡಿ ಅವರನ್ನು ಸಮಾಧಾನ ಪಡಿಸಿದ್ದಾರೆ.
ಎಲ್ಲರಿಗೂ ಅವಕಾಶ ಸಿಗಲಿ
ನಾನೆಂದೂ ಖರ್ಗೆ, ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗಬಾರದು ಎಂದು ಹೇಳೇ ಇಲ್ಲ. 2013 ರಲ್ಲಿ ನಮ್ಮ ಪಕ್ಷದ ಶಾಸಕರು ಹೇಳಿದ್ದರು, ಹೈಕಮಾಂಡ್ ನವರು ಹೇಳಿದ್ದರು. ಹಾಗಾಗಿ ಮುಖ್ಯಮಂತ್ರಿ ಆಗಿದ್ದೆ. ಎಲ್ಲರಿಗೂ ಅವಕಾಶ ಸಿಗಬೇಕು ಎಂದರು.