ಜಮ್ಮು ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯಕ್ಕೆ ಮಹಿಳೆಯ ಬಲಿ

ಶ್ರೀನಗರ, ಜೂ.5- ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳ ಕ್ರೌರ್ಯ ಮುಂದುವರಿದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು, ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಪುಲ್ವಾಮಾ ಜಿಲ್ಲೆಯ ಸಿಂಗೂ-ನರ್ಬಲ್‍ನ ಮನೆಯೊಂದರ ಮೇಲೆ ದಾಳಿ ನಡೆಸಿದ ಉಗ್ರರು ಪುರುಷ ಮತ್ತು ಮಹಿಳೆ ಮೇಲೆ ಗುಂಡು ಹಾರಿಸಿ ಪರಾರಿಯಾದರು. ತೀವ್ರ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಆತನ ಸ್ಥಿತಿ ಶೋಚನೀಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರ ಕ್ರೌರ್ಯಕ್ಕೆ ಬಲಿಯಾದ ಮಹಿಳೆಯನ್ನು ನಿಗೀನಾ ಬಾನೋ ಎಂದು ಗುರುತಿಸಲಾಗಿದೆ.

ಹಂತಕ ಉಗ್ರರಿಗಾಗಿ ಪೊಲೀಸರು ತೀವ್ರ ಶೋಧ ಮುಂದುವರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ