ನಾಳೆ ಜಲಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು, ಜೂ.6- ಬೆಂಗಳೂರು ಜಲಮಂಡಲಿಯ ಸಕಾನಿಅ (ಪೂರ್ವ-1) ಉಪವಿಭಾಗದಲ್ಲಿ ನಾಳೆ ಬೆಳಗ್ಗೆ 9.30ರಿಂದ 11 ಗಂಟೆವರೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್‍ಅನ್ನು ನಡೆಸಲಾಗುತ್ತದೆ.

ಸಕಾನಿಅ (ಪೂರ್ವ-1) ಉಪವಿಭಾಗ ವ್ಯಾಪ್ತಿಗೆ ಬರುವ ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರ, ಓ.ಎಂ.ಬಿ.ಆರ್ ಲೇಔಟ್, ಮತ್ತು ಹೆಚ್.ಬಿ.ಆರ್ ಲೇಔಟ್ ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು 1ನೇ ಬ್ಲಾಕ್, ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ಪೂರ್ವ): 22945158. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಪೂರ್ವ-1) ಉಪವಿಭಾಗ: 22945170.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರುನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:22238888, ಸಹಾಯವಾಣಿ 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ:8762228888 ಗೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯ ಬಳಸಿಕೊಳ್ಳ ಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ