ವಿದ್ಯಾರ್ಥಿಗಳ ಬಸ್‍ಪಾಸ್‍ನ ಸ್ಮಾರ್ಟ್‍ಕಾರ್ಡ್‍ಗಳನ್ನು ಬಿಡುಗಡೆ ಮಾಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.6- ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳ ಬಸ್‍ಪಾಸ್‍ನ ಸ್ಮಾರ್ಟ್‍ಕಾರ್ಡ್‍ಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಮಾರ್ಟ್‍ಕಾರ್ಡ್ ಮಾದರಿಯ ಬಸ್‍ಪಾಸ್‍ಗಳಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ವಿ.ಪ್ರಸಾದ್ ಮಾತನಾಡಿ, ಬಿಎಂಟಿಸಿ ವ್ಯಾಪ್ತಿಗೆ ಒಳಪಡುವ ಶಾಲಾಕಾಲೇಜು ವಿದ್ಯಾರ್ತಿಗಳಿಗೆ ಇಂದಿನಿಂದ ಆನ್‍ಲೈನ್‍ನಲ್ಲಿ ರಿಯಾಯ್ತಿ ದರದ ಬಸ್ ಪಾಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

92 ಕೌಂಟರ್‍ಗಳನ್ನು ತೆರೆಯಲಾಗಿದೆ. ಕಳೆದ ವರ್ಷ ಸ್ಮಾರ್ಟ್ ಕಾರ್ಡ್ ಪಡೆದಂತಹ ವಿದ್ಯಾರ್ಥಿಗಳು ನವೀಕರಿಸಿಕೊಳ್ಳಬಹುದಾಗಿದೆ. 2500 ಲಕ್ಷ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದಿದ್ದಾರೆ. ಈ ಬಾರಿ ಒಂದು ಲಕ್ಷ ಹೊಸ ಕಾರ್ಡ್‍ಗಳನ್ನು ವಿತರಿಸುವ ಸಾದ್ಯತೆ ಇದೆ ಎಂದರು.

ಸದ್ಯಕ್ಕೆ ವಿದ್ಯಾರ್ಥಿಗಳ ಪಾಸ್ ದರವನ್ನು ಪರಿಷ್ಕರಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂದಿನ ಸೋಮವಾರದಿಂದ ಸ್ಮಾರ್ಟ್‍ಕಾರ್ಡ್‍ಗಳನ್ನು ಎಲ್ಲ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರೀಸ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು ಮತ್ತಿತರರು ಪಾಲ್ಗೊಂಡಿದ್ದರು.

2017-18ರಲ್ಲಿ ಒಟ್ಟು 3.73 ಲಕ್ಷ ವಿದ್ಯಾರ್ಥಿಗಳಿಗೆ, 2018-19 ರಲ್ಲಿ 3.35 ಲಕ್ಷ ವಿದ್ಯಾರ್ಥಿಗಳಿಗೆ ರಿಯಾಯ್ತಿ ಬಸ್‍ಪಾಸ್‍ಗಳನ್ನು ವಿತರಣೆ ಮಾಡಲಾಗಿದೆ. ಈ ಬಾರಿ ಅವುಗಳನ್ನು ಸ್ಮಾರ್ಟ್‍ಕಾರ್ಡ್‍ಗಳನ್ನಾಗಿ ಪರಿವರ್ತಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ