ಕೇರಳದಲ್ಲಿ ನಿಫಾ ವೈರಸ್ ಪತ್ತೆ-ರಾಜ್ಯದಲ್ಲಿ ಅಗತ್ಯ ಮುಂಜಾಗೃತ ಕ್ರಮ ಕೈಗೊಂಡಿದ್ದವೆ-ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಜೂ.6-ಕೇರಳದಲ್ಲಿ ಪತ್ತೆಯಾಗಿರುವ ಮಾರಣಾಂತಿಕ ನಿಫಾ ಕಾಯಿಲೆ ಸಂಬಂಧಪಟ್ಟ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿಲ್ಲ. ಆದರೂ ನಾವು ಅಗತ್ಯ ಮುಂಜಾಗ್ರತ ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಸಚಿವ ಶಿವಾನಂದ್ ಪಾಟಿಲ್ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಕೇರಳದ ಗಡಿಭಾಗ ಕರಾವಳಿ ಮಂಗಳೂರು, ಉಡುಪಿಗಳಲ್ಲಿ ಅತ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಇದಕ್ಕಾಗಿ ಕಾರ್ಯದರ್ಶಿಯೊಬ್ಬರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದರು.

ಈಗಾಗಲೇ ಕೇರಳದ ಆರೋಗ್ಯ ಸಚಿವರ ಜೊತೆ ಸಂಪರ್ಕ ಸಾಧಿಸಿದ್ದು, ಅಲ್ಲಿನ ವಾತಾವರಣದ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ. ರಾಜ್ಯದ ಜನ ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೇರಳದ ಪ್ರವಾಸಿಗರ ಬಗ್ಗೆಯೂ ಗಮನಹರಿಸಲಾಗಿದೆ ಎಂದು ತಿಳಿಸಿದರು.

ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸುತ್ತೋಲೆಯನ್ನು ರವಾನಿಸಿದೆ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಮಾತನಾಡಿ, ಯಾವುದೆ ಆತಂಕ ಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿದೆ.ಸಾಮಾನ್ಯ ಜ್ವರ ಮತ್ತು ವಾಂತಿಯಂತಹ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ಚಿಕಿತ್ಸೆ ಪಡೆಯಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ