ಶಾಂಘೈ ಶೃಂಗ ಸಭೆಯಲ್ಲಿ ಭಾರತ-ಪಾಕ್ ಮಾತುಕತೆಯಿಲ್ಲ

ನವದೆಹಲಿ: ಚೀನಾದ ಬಿಷ್ಕೆಕ್​ನಲ್ಲಿ ಜೂನ್​ 13 ಮತ್ತು 14ರಂದು ನಿಗದಿಯಾಗಿರುವ ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಶೃಂಗ ಸಭೆಯ ವೇಳೆ ಪಾಕಿಸ್ತಾನದೊಂದಿಗೆ ಭಾರತ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ರಾವೀಶ್​ ಕುಮಾರ್​, ಸಭೆಯ ವೇಳೆ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಜತೆ ಪ್ರಧಾನಿ ನರೇಂದ್ರ ಮೋದಿ ಅನೌಪಚಾರಿಕ ಮಾತುಕತೆ ಕೂಡ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಎಸ್​ಸಿಒ ಶೃಂಗಕ್ಕೆ ಕೆಲವೇ ದಿನಗಳು ಬಾಕಿಯಿರುವಂತೆ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಭಾರತದ ಪ್ರವಾಸಕ್ಕೆ ಆಗಮಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಖಾಸಗಿ ಭೇಟಿ. ಈ ಸಂದರ್ಭದಲ್ಲಿ ಅವರೊಂದಿಗೆ ಯಾವುದೇ ಅಧಿಕೃತ ಸಭೆಗಳು ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮೊದಲಿಗೆ ತಮ್ಮ ನೆಲದಲ್ಲಿರುವ ಉಗ್ರರನ್ನು ಪಾಕಿಸ್ತಾನ ಸಂಪೂರ್ಣವಾಗಿ ಹತ್ತಿಕ್ಕಬೇಕು. ಆ ಬಳಿಕವಷ್ಟೇ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ಕುರಿತು ಚಿಂತನೆ ನಡೆಸಲಾಗುವುದು ಎಂದರು.

No India-Pakistan bilateral meet planned between Narendra Modi and Imran Khan at SCO: MEA

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ