ಬೆಂಗಳೂರು, ಜೂ.8-ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಮಿತಿ ವತಿಯಿಂದ ದಲಿತ ಚೇತನ ಪ್ರೊ.ಡಿ.ಕೃಷ್ಣಪ್ಪ ಅವರ 81ನೇ ಜನ್ಮ ದಿನಾಚರಣೆ ಅಂಗವಾಗಿ ಜೂ.13ರಂದು ಸಾಮಾಜಿಕ ಸಮಾನತೆಗಾಗಿ ಸಂಘರ್ಷ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ಸಮಾವೇಶ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‍ಖರ್ಗೆ ಅವರು ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯ ಸಮಿತಿ ಸದಸ್ಯ ನಾಗತಿಹಳ್ಳಿ ನಾಗರಾಜ್, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಮಿತಿ ಮುಖ್ಯ ಸಲಹೆಗಾರ ಚಂದ್ರಶೇಖರಯ್ಯ, ಪತ್ರಕರ್ತ ದಿನೇಶ್ ಅಮೀನ್‍ಮಟ್ಟು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾವಳ್ಳಿ ಶಂಕರ್ ತಿಳಿಸಿದರು.