
ಬೆಂಗಳೂರು,ಜೂ.08-ಮಂಡ್ಯ ನೂತನ ಪಕ್ಷೇತರ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಸಂಸದರಾದ ಮೇಲೆ ಮೊದಲ ಬಾರಿಗೆ ಬೆಂಬಲಿತ ರಾಷ್ಟ್ರೀಯ ಪಕ್ಷ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದರು. ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ, ಬೆಂಗಳೂರು ನಗರ ಅಧ್ಯಕ್ಷರಾದ ಶ್ರೀ ಪಿ.ಎಂ.ಸದಾಶಿವ ಅವರು ಸ್ವಾಗತಿಸಿದರು. ಮೊದಲು ಭಾರತಾಂಭೆ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.