ಶ್ರೀನಗರ, ಜೂ.8-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ದಿನನಿತ್ಯದ ಸುದ್ದಿಯಾಗುತ್ತಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ವೆರಿನಾಗ್ ಪ್ರದೇಶದಲ್ಲಿ ಇಂದು ನಸುಕಿನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಭದ್ರತಾ ಪಡೆ ಯೋಧರು ಶೋಧ ಕಾರ್ಯ ಆರಂಭಿಸಿದಾಗ ಇದ್ದಕ್ಕಿದ್ದಂತೆ ಅವಿತು ಕುಳಿತಿದ್ದ ಉಗ್ರರು ಯೋಧರತ್ತ ಗುಂಡಿನ ಮಳೆಗೈಯಲಾರಂಭಿಸಿದರು. ಇನ್ನಷ್ಟು ಉಗ್ರರು ಅವಿತಿರುವ ಸಾಧ್ಯತೆಯಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಕಾಶ್ಮೀರದಲ್ಲಿ ನಿನ್ನೆ ಭಾರತೀಯ ಸೇನೆ ಭರ್ಜರಿ ಸೇನಾ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿ ಕುಳಿತುದ್ದ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದರು.