ಅಮೆರಿಕಾದಲ್ಲಿ ಅಪಘಾತದಲ್ಲಿ ಮೃತಪಟ್ಟ ಸಾಫ್ಟ್‍ವೇರ್ ಇಂಜನಿಯರ್-ಅವರ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲು ಪ್ರಯತ್ನ-ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜೂ.9-ಅಮೆರಿಕಾದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಬೀದರ್ ಮೂಲದ ಸಾಫ್ಟ್‍ವೇರ್ ಇಂಜಿನಿಯರ್ ಮುಖೇಶ್ ದೇಶಮುಖ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಟ್ವಿಟರ್‍ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮುಖೇಶ್ ಅವರ ಪುತ್ರಿ ದಿವಿಜಾ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮುಖೇಶ್ ಅವರ ಪತ್ನಿ ಮೋನಿಕಾ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ.

ಅಮೆರಿಕದ ಜೊತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಮುಖೇಶ್ ಕುಟುಂಬದ ಜೊತೆಗೂ ನಿರಂತರವಾಗಿ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಅಮೆರಿಕದ ಜಂಟಿ ಕಾರ್ಯದರ್ಶಿ ನಿರಂತರ ಮಾತುಕತೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬೀದರ್ ಮೂಲದ ಸಾಫ್ಟ್‍ವೇರ್ ಇಂಜಿನಿಯರ್ ಮುಖೇಶ್ ಅವರ ಪತ್ನಿ ಮೋನಿಕಾ, ಪುತ್ರಿ ದಿವಿಜಾ ಅವರು ಕುಟುಂಬ ಸಮೇತರಾಗಿ ದಿವಿಜಾಳ ಬರ್ತಡೇ ಆಚರಣೆಗಾಗಿ ತೆರಳುವಾಗ ಕಳೆದ ಗುರುವಾರ ಅಮೆರಿಕದ ಕೊಲಂಬಸ್ ಕಂಟ್ರಿ ಬಳಿ ಕಾರು ಟ್ಯಾಂಕರ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ತಂದೆ-ಮಗಳು ಸಾವನ್ನಪ್ಪಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ