ಶಿಕ್ಷಣ ವ್ಯವಸ್ಥೆಯು ಕೇವಲ ವರ್ಗಾವಣೆಯಾಗದೆ ಪರಿವರ್ತನೆಗೆ ಕಾರಣವಾಗಬೇಕು-ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು, ಜೂ.9- ಇಪ್ಪತ್ತೊಂದನೇ ಶತಮಾನದಲ್ಲಿ ನಮ್ಮ ಯುವ ಜನತೆಯನ್ನು ಸಮರ್ಥವಾಗಿ ಸಜ್ಜುಗೊಳಿಸಲು ಜ್ಞಾನ ಮತ್ತು ಕೌಶಲ್ಯ ಆಧಾರಿತ ಶಿಕ್ಷಣ ನೀಡುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು ಎಂದು ಉಪ ರಾಷ್ಟ್ರಪತಿ ಡಾ.ಎಂ.ವೆಂಕಯ್ಯ ನಾಯ್ಡು ವಿದ್ಯಾಸಂಸ್ಥೆಗಳಿಗೆ ಕರೆ ನೀಡಿದ್ದಾರೆ.

ನಗರದಲ್ಲಿಂದು ಸತ್ಯಸಾಯಿ ಇನ್‍ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್ ಸಂಸ್ಥೆಯ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣ ವ್ಯವಸ್ಥೆಯು ಕೇವಲ ವರ್ಗಾವಣೆಯಾಗಬಾರದು.ಅದು ಮಹತ್ವದ ಪರಿವರ್ತನೆಗೆ ಕಾರಣವಾಗಬೇಕು ಎಂದು ಅವರು ಶಿಕ್ಷಣ ಸಂಸ್ಥೆಗಳಿಗೆ ಸಲಹೆ ಮಾಡಿದರು.

ಇಂದು ಅತ್ಯಂತ ಸ್ಪರ್ಧಾತ್ಮಕ ಯುಗ. ಹೀಗಾಗಿ ಮಕ್ಕಳಿಗೆ ಈಗನಿಂದಲೇ ಶಿಕ್ಷಣದ ಭದ್ರ ಬುನಾದಿ ಹಾಕಬೇಕು.ಜತೆಗೆ ಮಾತೃ ಭಾಷೆ ಶಿಕ್ಷಣದ ಜತೆಗೆ ವಿವಿಧ ಭಾಷೆಗಳಲ್ಲಿ ಅವರು ಪ್ರೌಢಿಮೆ ಹೊಂದಲು ಶಿಕ್ಷಣ ಸಂಸ್ಥೆಯ ಜತೆಗೆ ಪೋಷಕರು ಸಹ ನೆರವಾಗಬೇಕು ಎಂದು ಉಪ ರಾಷ್ಟ್ರಪತಿ ಇದೇ ಸಂದರ್ಭದಲ್ಲಿ ಕರೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ