ಗೋರಖ್ಪುರ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.
ಸಿಎಂ ಯೋಗಿ ಆದಿತ್ಯನಾಥ್ ಕುರಿತು ಅವಹೇಳನಕಾರಿ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಬಂಧಿಸಲಾಗಿದ್ದು, ಆತನ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನಾ ಖಾಸಗಿ ಮಾಧ್ಯಮವೊಂದರ ಸಂಪಾದಕ, ಮಾಲೀಕ ಪ್ರಶಾಂತ್ ಕನೋಜ್ ಎಂಬುವವರನ್ನು ಬಂಧಿಸಲಾಗಿತ್ತು. ಸಿಎಂ ಯೋಗಿ ಕುರಿತು ಆಕ್ಷೇಪಾರ್ಹ ವಿಷಯವನ್ನು ಬಿತ್ತರಿಸಿದ್ದಾರೆ ಎಂಬ ಆರೋಪ ಮೇಲೆ ಬಂಧನ ಮಾಡಲಾಗಿತ್ತು. ಇವರು ಕೂಡ ಸಿಎಂ ಯೋಗಿ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು ಎನ್ನಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಖಾಸಗಿ ಸದ್ದಿ ಮಾಧ್ಯಮದ ಮಾಲೀಕ ಇಸಿಕಾ ಸಿಂಗ್ ಮತ್ತು ಸಂಪಾದಕ ಅನುಜ್ ಶುಕ್ಲ ಎಂಬುವವರನ್ನು ಶನಿವಾರ ನೋಯ್ಡಾದಲ್ಲಿ ಬಂಧಿಸಲಾಗಿತ್ತು.
ಪತ್ರಕರ್ತರ ಬಂಧನದಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಹಾಗೂ ವಿರೋಧಕ್ಕೆ ಗ್ರಾಸವಾಗಿತ್ತು. ಹಿರಿಯ ಸಂಪಾದಕ ಸಂಘವು ಇದನ್ನು ವಿರೋಧಿಸಿ, ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದರು.
4 Arrests In 2 Days in UP Over Allegations of “Defaming” Yogi Adityanath