ಜೆಎಸ್‍ಎಸ್ ಮಹಾವಿದ್ಯಾಪೀಠದಿಂದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆ ತರಬೇತಿಗೆ ಅರ್ಜಿ

ಬೆಂಗಳೂರು ,ಜೂ.10- ಜೆಎಸ್‍ಎಸ್ ಮಹಾವಿದ್ಯಾಪೀಠ ಜೆಎಸ್‍ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವತಿಯಿಂದ ಕೇಂದ್ರೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಗಳ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ 2020ರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತರಬೇತಿಗಾಗಿ ಜೆಎಸ್‍ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆರು ತಿಂಗಳ ಕಾಲ ನೀಡುವ ಈ ತರಬೇತಿಯು ಜುಲೈ ಮೂರನೇ ವಾರದಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಜು.3ರೊಳಗೆ ಅರ್ಜಿ ಸಲ್ಲಿಸಬೇಕೆಂದು ಜಸ್ಟೀಸ್‍ನ ನಿರ್ದೇಶಕ ಎಂ.ಬಿ.ದ್ಯಾಬೇರಿ ಐಎಎಸ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗ ದೂ: 080-22970114/ ಮೊ:9845055718 ಸಂಪರ್ಕಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ