ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು ಬೇಡ. ಸಾರ್ವಜನಿಕ ದರ್ಶನ ಇರುವುದಿಲ್ಲ. ಯಾವುದೇ ವಿಧಿ ವಿಧಾನ ಇರುವುದಿಲ್ಲ ಎಂದು ನಿರ್ದೇಶಕ ಕೆ.ಎಂ ಚೈತನ್ಯ ತಿಳಿಸಿದ್ದಾರೆ.
ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಸರಸ್ವತಿ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.