ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಬಿಹಾರ ಸರ್ಕಾರ

ಪಟಾನಾ: ನಿತೀಶ್‌ ಕುಮಾರ್‌ ನೇತೃತ್ವದ ಬಿಹಾರ ಸರ್ಕಾರವು ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳನ್ನು ಜೈಲಿಗೆ ಹಾಕುವ ಕಠಿಣ ಕ್ರಮವನ್ನು ಜಾರಿಗೆ ತರಲು ಮುಂದಾಗಿದೆ.

ಬಿಹಾರದ ಸಂಪುಟ ಸುಮಾರು 19 ಪ್ರಸ್ತಾಪಗಳಿಗೆ ಅನುಮೋದನೆ ನೀಡಿದ್ದು, ಮುಖ್ಯವಾಗಿ ಮಕ್ಕಳು ಅವರ ಹಿರಿಯ ಹೆತ್ತವರನ್ನು ಬಿಟ್ಟುಬಿಡುವುದು ಅಥವಾ ಅವರನ್ನು ಕಾಳಜಿ ವಹಿಸದಿರುವವರನ್ನು ತಪ್ಪಿತಸ್ಥರೆಂದು ತೀರ್ಮಾನಿಸಿ ಜೈಲಿಗೆ ಕಳುಹಿಸುವ ಪ್ರಸ್ತಾಪಕ್ಕೆ ಗ್ರೀನ್‌ ಸಿಗ್ನಲ್‌ ನೀಡಲಾಗಿದ್ದು, ಹಾಗಾಗಿ ವೃದ್ಧ ಪಾಲಕರ ಆರೋಗ್ಯ, ಸಂತೋಷ ಮತ್ತು ಕಾಳಜಿ ವಹಿಸುವುದು ಪ್ರತಿಯೊಬ್ಬರಿಗೂ ಕಡ್ಡಾಯವಾಗಿದೆ.

ಮಕ್ಕಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಹೆತ್ತವರು ದೂರು ಸಲ್ಲಿಸಿ ಆರೋಪ ಸಾಬೀತಾದರೆ ತಪ್ಪಿತಸ್ಥ ಮಕ್ಕಳಿಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ಪ್ರಸ್ತಾಪಕ್ಕೆ ರಾಜ್ಯ ಸಂಪುಟ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಅಂತಿಮವಾಗಿ ವಿಧಾನಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ.

ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಈ ರೀತಿಯ ಕಾನೂನು ಅಗತ್ಯವಾಗಿ ಬೇಕಾಗಿದೆ. ಮಕ್ಕಳು ತಮ್ಮ ಬೆಳೆವಣಿಗೆಯ ವೇಳೆ ಪಾಲಕರು ಮಾಡಿದ ಎಲ್ಲ ತ್ಯಾಗಗಳನ್ನು ಪಕ್ಕಕ್ಕೆ ತಳ್ಳಿ ತಮ್ಮ ಹಿರಿಯ ಪಾಲಕರನ್ನು ತಮ್ಮಿಂದ ದೂರವಿಡಲು ನಿರ್ಧರಿಸುತ್ತಾರೆ. ಇಳಿವಯಸ್ಸಿನಲ್ಲಿ ಅವರ ಮಕ್ಕಳು ಸಂತೋಷವಾಗಿ ನೋಡಿಕೊಳ್ಳುವುದು ಅವರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಇದಕ್ಕಾಗಿಯೇ ಸೂಕ್ತ ಕಾನೂನು ರಚಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

Children guilty of failing to take care of elderly parents may be jailed in Bihar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ