
ಬೆಂಗಳೂರು; ಕಳೆದ ಒಂದು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ರೈತರ ಬೆಳೆ ಸಾಲಮನ್ನಾ ಕುರಿತು ಕೊನೆಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮಂಗಳವಾರ ನಡೆದ ಸಭೆಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಎಲ್ಲಾ ಬೆಳೆ ಸಾಲಗಳನ್ನೂ ಏಕಕಾಲದಲ್ಲಿ ಮನ್ನಾ ಮಾಡುವಂತೆ ಸಿಎಂ ಕುಮಾರಸ್ವಾಮಿ ಆದೇಶಿಸಿದ್ದಾರೆ.
ವಾಣಿಜ್ಯ ಬ್ಯಾಂಕುಗಳಿಂದ ರೈತರು ಪಡೆದಿರುವ ಬೆಳೆ ಸಾಲಮನ್ನಾ ಯೋಜನೆಗೆ ಸಂಬಂಧಿಸಿದಂತೆ, ಅರ್ಹತೆ ಹೊಂದಿರುವ ಓವರ್ ರಿಸ್ಟ್ರಕ್ಚರ್ಡ್ ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳನ್ನು ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ.
ಆದರೆ, ಜನವರಿ 1 2018ರ ನಂತರದ ರೈತರ ಅನುತ್ಪಾದಕ ಸಾಲಗಳ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕ ನಿರ್ಧಾರ ತೆಗೆದುಕೊಳ್ಳುವುದಾಗಿಯೂ ಕುಮಾರಸ್ವಾಮಿ ತಿಳಿಸಿದ್ದಾರೆ.