ಪಾಲಿಕೆ ನೌಕರರ ಹಬ್ಬದ ಮುಂಗಡ ಹೆಚ್ಚಳ

ಬೆಂಗಳೂರು, ಜೂ.12- ಬಿಬಿಎಂಪಿ ನೌಕರರಿಗೆ ನೀಡುವ ಹಬ್ಬದ ಮುಂಗಡ ವನ್ನು ಪರಿಷ್ಕರಣೆಗೊಳಿಸಲಾಗಿದ್ದು, 5,000 ರೂ.ಗಳಿಂದ 10,000ರೂ.ಗಳಿಗೆ ಹೆಚ್ಚಿಸಲಾಗಿದೆ.

ಇದುವರೆಗೆ ಪಾಲಿಕೆ ನೌಕರರಿಗೆ ಹಬ್ಬದ ಮುಂಗಡವಾಗಿ 5,000ರೂ.ಗಳನ್ನು ಮಾತ್ರ ನೀಡಲಾಗುತ್ತಿತ್ತು. ಇದನ್ನು ಇನ್ನಷ್ಟು ಹೆಚ್ಚಿಸಬೇಕೆಂಬ ಒತ್ತಾಯಗಳು ಕೇಳಿ ಬಂದಿದ್ದವು. ಈ ಕುರಿತು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಹಾಗೂ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.

ಇದೀಗ ಸರ್ಕಾರದಿಂದ ಇದಕ್ಕೆ ಅನುಮೋದನೆ ಸಿಕ್ಕಿದ್ದು, ಖಾಯಂ ಸರ್ಕಾರಿ ನೌಕರರಿಗೆ ಆರ್ಥಿಕ ವರ್ಷದಲ್ಲಿ ಒಂದು ಬಾರಿಗೆ ಮಾತ್ರ ಪ್ರಸ್ತುತ ಮಂಜೂರು ಮಾಡಲಾಗುತ್ತಿದ್ದ, ಹಬ್ಬದ ಮುಂಗಡವನ್ನು 5,000ರೂ.ಗಳಿಂದ 10,000 ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ