ಬೆಂಗಳೂರು, ಜೂ. 13- ವಿಶ್ವ ರಕ್ತದಾನಿಗಳ ದಿನಾಚರಣೆ ಸಂಭ್ರಮಾಚರಣೆಯು ನಾಳೆ ಬೆಳಿಗ್ಗೆ 10.30ಕ್ಕೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕೆ.ಎಸ್.ಪ್ರಕಾಶ್, ಲವ್ಲಿ ಸ್ಟಾರ್ ಪ್ರೇಮ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ರಕ್ತ ಸುರಕ್ಷತೆ ಮತ್ತು ಎಸ್ಐಟಿ ಜಂಟಿ ನಿರ್ದೇಶಕ ಡಾ. ಜಯರಾಜು. ಡಿ., ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಅಧಿಕಾರಿಗಳಾದ ಶ್ರೀನಿವಾಸ್ ಜಿ.ಎ., ಡಾ. ಅನುಸೂಯ ಕೆ., ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್-317-ಎ ಜಿಲ್ಲಾ ರಾಜ್ಯಪಾಲರು, ಲಯನ್ಸ್ ವಿ.ರೇಣುಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಡೀನ್ ಡಾ.ಸತ್ಯಮೂರ್ತಿ, ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಕೆ.ಎಂ.ಗೋವಿಂದರಾಜು, ಲಯನ ಡಾ.ಎಚ್.ಎನ್.ಶಿವನಂಜಯ್ಯ, ಚಲನಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ವಯಂ ಪ್ರೇರಿತ ರಕ್ತದಾನಿಗಳಿಗೆ ಮತ್ತು ರಕ್ತದಾನ ಶಿಬಿರ ಆಯೋಜಕರಿಗೆ ಇದೇ ವೇಳೆ ಅಭಿನಂದನೆ ಸಲ್ಲಿಸಲಾಗುವುದು.ಪ್ರಬಂಧ ಬರವಣಿಗೆಗೆ ಬಹುಮಾನ ವಿತರಣೆ ಮಾಡಲಾಗುವುದು.
ಬೆಳಿಗ್ಗೆ 9ರಿಂದ ಸಂಜೆ 5ಗಂಟೆ ವರೆಗೆ ರಕ್ತನಿಧಿಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಪ್ರೇಮಂ ಪೂಜ್ಯಂ ಚಲನಚಿತ್ರ ತಂಡ ಮತ್ತು ಲವ್ಲಿ ಸ್ಟಾರ್ ಪ್ರೇಮ್ ಅಭಿಮಾನಿ ಬಳಗದವರು ರಕ್ತದಾನ ಮಾಡಲಿದ್ದಾರೆ.