ಬೆಂಗಳೂರು, ಜೂ.13- ಮಾಸ್ಟರ್ ಹಿರಣ್ಣಯ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಜೂ.16ರಂದು ಮಧ್ಯಾಹ್ನ 2 ಗಂಟೆಗೆ ಕೆಂಗೇರಿ ಉಪನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಸಮಿತಿ ಅನುಭವ ಮಂಟಪ ಬಂಡೇಮಠದಲ್ಲಿ ಆಯೋಜಿಸಲಾಗಿದೆ.
ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ರಂಗ ಕಲಾವೇದಿಕೆಯು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಕಾರದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಎಂ.ತಿಮ್ಮಯ್ಯ ಉದ್ಘಾಟಿಸಲಿದ್ದು, ಕಸಾಪ ಅಧ್ಯಕ್ಷ ಮಾಯಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ರಂಗ ಕಲಾವಿದ ಶ್ರೀನಿಧಿ ಎಸ್. ಅವರಿಗೆ ಮಾಸ್ಟರ್ ಹಿರಣ್ಣಯ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಚಲನಚಿತ್ರ ನಿರ್ದೇಶಕ ಸುಧೀರ್ ಶ್ಯಾನ್ಬೋಗ್, ರಾ.ನವೀನ್‍ಕುಮಾರ್ ಬಾಬು, ಡಾ.ವೇ.ಅಜಿತ್‍ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಂಗ ಕಲಾವಿದರಾದ ಬಾಬು ಹಿರಣ್ಣಯ್ಯ, ರಂಗಕಲಾ ವೇದಿಕೆ ಅಧ್ಯಕ್ಷೆ ಗಾಯತ್ರಿ, ಜ್ಞಾನ ಗಂಗೋತ್ರಿ ವಿದ್ಯಾಶಾಲೆ ಪ್ರಾಂಶುಪಾಲರಾದ ನಾಗರತ್ನ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಸಾಪ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.