ಬೆಂಗಳೂರು, ಜೂ.13- ವಂಚನೆ ಪ್ರಕರಣವೊಂದರಲ್ಲಿ ಸಿಸಿಬಿ ಪೊಲೀಸರು ಪ್ರಮುಖ ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಮಿಸ್ಬಾ ಮುಖರಂನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಕೋಟ್ಯಂತರ ರೂ.ವಂಚನೆ ಬಗ್ಗೆ ಇಂಜಾಜ್ ಕಂಪೆನಿ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರುಗಳು ಬಂದಿದ್ದವು. ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದರು.
ಸಿಸಿಬಿ ಪೊಲೀಸರು ಮಿಸ್ಬಾ ಮುಖರಂ ಬಗ್ಗೆ ಮಾಹಿತಿ ಕಲೆ ಹಾಕಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.