ಬೆಂಗಳೂರು, ಜೂ.14-ಪ್ರಧಾನಮಂತ್ರಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಾಳೆ ನಡೆಯುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಇಂದು ರಾತ್ರಿ ದೆಹಲಿಗೆ ತೆರಳುವ ಮುಖ್ಯಮಂತ್ರಿಗಳು ನಾಳೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುವ 5ನೇ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ದೆಹಲಿ ಪ್ರವಾಸ ಮುಗಿಸಿ ಭಾನುವಾರ ನಗರಕ್ಕೆ ಮರಳುವ ಕಾರ್ಯಕ್ರಮವಿದೆ.