ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ಪಕ್ಷೇತರ ಶಾಸಕರಾದ ಆರ್ ಶಂಕರ್ ಹಾಗೂ ಹೆಚ್ ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟ್ಟದ ದರ್ಜೆ ಸಚಿವರಾಗಿ ಇಬ್ಬರು ನೂತನ ಸಚಿವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಚಿವರ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಕೋಟಾದಡಿ ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಳಿಕ ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್ ನಾಗೇಶ್ ಅವರು ಜೆಡಿಎಸ್ ಕೋಟಾದಡಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಿಎಂ ಹೆಚ್ ದಿ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸಿಎಂ, ಸಮನ್ವಯ ಸಮೀತಿ ಅಧ್ಯಕ್ಷ ಸಿದ್ದರಾಮಯ್ಯ, ಸಚಿವರಾದ ಡಿ ಕೆ ಶಿವಕುಮಾರ್, ಎಂ ಬಿ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
coalition government,cabinet expand,R Shankar,H Nagesh,Oath