ಮುಂಬೈ: ಇಲ್ಲಿನ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ ವಾಹನಗಳು ಶುಕ್ರವಾರ ಬೆಳಿಗ್ಗೆ ನಡೆದ ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿವೆ.
ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಇದುವರೆಗೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.