![Sudhee_14_Oath_Taking_@_Rajbhavan (5)](http://kannada.vartamitra.com/wp-content/uploads/2019/06/Sudhee_14_Oath_Taking_@_Rajbhavan-5-1-538x381.jpg)
ಬೆಂಗಳೂರು, ಜೂ.14- ತಮ್ಮನ್ನು ಸಚಿವರನ್ನಾಗಿ ಮಾಡಿರುವುದಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಉಭಯ ಪಕ್ಷಗಳ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ನೂತನ ಸಚಿವ ಎಚ್.ನಾಗೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರಕ್ಕೆ ನಮ್ಮ ಬೆಂಬಲವಿದೆ.ಯಾವುದೇ ಖಾತೆ ಕೊಟ್ಟರೂ ನಾವು ನಿರ್ವಹಿಸಲು ಬದ್ಧರಾಗಿದ್ದೇವೆ. ಆದರೆ, ಜೆಡಿಎಸ್ಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿದರು.
ಜನರಿಗೆ ಹತ್ತಿರವಾಗಿ ಕೆಲಸ ಮಾಡುತ್ತೇನೆ. ಮೈತ್ರಿ ಸರ್ಕಾರಕ್ಕೆ ನಮ್ಮ ಬೆಂಬಲವಿದೆ ಎಂದು ಮತ್ತೊಬ್ಬ ನೂತನ ಸಚಿವರಾದ ಶಂಕರ್ ಹೇಳಿದರು.
ಮುಖ್ಯಮಂತ್ರಿ ಸೇರಿದಂತೆ ಉಭಯ ಪಕ್ಷಗಳ ನಾಯಕರಿಗೆ ಅಭಿನಂದನೆ ಸಲ್ಲಿಸಿದ ಅವರು ತಮಗೆ ಯಾವುದೇ ಖಾತೆ ಕೊಟ್ಟರೂ ಅದನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತೇವೆ ಎಂದರು.