ನವದೆಹಲಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ನರೇಗಾ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಲೋಕ ಕಲ್ಯಾಣ್ ಮಾರ್ಗದ ನಿವಾಸದಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ, ನರೇಗಾ ಯೋಜನೆಯ ಬಾಕಿ ಹಣವಾದ 1,950 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಬಳಿಕ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲಿರುವ ಸಿಎಂ ಕುಮಾರಸ್ವಾಮಿ, ಮೇಕೆದಾಟು ಯೋಜನೆಯ ಬಗ್ಗೆ ಮಾತನಾಡುವ ಸಾಧ್ಯತೆಗಳಿವೆ. ರಾಜ್ಯ ಸರ್ಕಾರ ಈಗಾಗಲೇ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಿದೆ. ಈ ಯೋಜನೆ ಮುಂದುವರಿಕೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
CM H D kumaraswamy,meet,PM narendra modi